ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
ಭದ್ರಾವತಿ, ಸೆ. ೪ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳಿಗೆ ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಚಾಲನೆ ನೀಡಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ದೈಹಿಕ ಶಿಕ್ಷಕ ಶಿವಲಿಂಗೇಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅನಂದ್, ಕಾರ್ಯದರ್ಶಿ ಶ್ರೀಧರ್ ಸಾವಂತ್, ಅಥ್ಲೆಟಿಕ್ಸ್ ತರಬೇತಿದಾರ ಬಾಳಪ್ಪು ಮಾನೆ, ಖೋ ಖೋ ತರಬೇತಿದಾರ ಶ್ರೀನಿವಾಸ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಕಾರ್ತಿಕ್, ಕೇಶವ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಶಿವರಾಜ್, ದೇವರಾಜ್, ಕರಣ್‌ಸಿಂಗ್, ಗೋಪಾಲ, ನೂರ್ ಫಾತಿಮಾ, ರೇವತಿ, ಸಿದ್ದಯ್ಯ, ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅಥ್ಲೆಟಿಕ್ಸ್ ಸ್ಪರ್ಧೆಗಳು, ಪುಟ್‌ಬಾಲ್, ಖೋ ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್ ಹಾಗು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆದವು.
No comments:
Post a Comment