Thursday, September 8, 2022

ದೇವಸ್ಥಾನಗಳ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಬದ್ಧ

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ೪ ಕೋ. ಅನುದಾನ : ಬಿವೈಆರ್  

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಭದ್ರಾವತಿ, ಸೆ. ೮: ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜೀರ್ಣೋದ್ದಾರಗೊಳಿಸಲು ಕೇಂದ್ರ ಪುರಾತತ್ವ ಇಲಾಖೆಯಿಂದ ವಿಶೇಷವಾಗಿ ಸುಮಾರು ೪ ಕೋ. ರು. ಅನುದಾನ ಮಂಜೂರಾತಿ ಮಾಡುವಂತೆ ಮನವಿ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಗುರುವಾರ ದೇವಸ್ಥಾನಕ್ಕೆ ಭೇಟಿ ದೇವರ ದರ್ಶನ ಪಡೆದು ದೇವಾಲಯದ ಅಭಿವೃದ್ಧಿ ಸಮಿತಿ ಹಾಗು ಸ್ಥಳೀಯರೊಂದಿಗೆ ಚರ್ಚಿಸಿದರು.
     ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಪುರಾತನ ದೇವಾಯವಾಗಿದ್ದು, ಸಾಕಷ್ಟು ಶಿಥಿಲಗೊಂಡಿದೆ. ಈ ಹಿನ್ನಲೆಯಲ್ಲಿ ಜೀರ್ಣೋದ್ದಾರಗೊಳಿಸುವುದು ಅನಿವಾರ್ಯವಾಗಿದೆ. ವಿಶೇಷವಾಗಿ ಸುಮಾರು ೪ ಕೋ. ರು. ಅನುದಾನ ಬಿಡುಗಡೆಗೊಳಿಸುವಂತೆ ಕೋರಲಾಗುವುದು ಎಂದರು.
    ಒಂದು ವೇಳೆ ಅನುದಾನ ಬಿಡುಗಡೆಗೊಳ್ಳುವುದು ವಿಳಂಬವಾದಲ್ಲಿ ಸಂಸದರ ನಿಧಿಯಿಂದ  ಶೌಚಾಲಯ ನಿರ್ಮಾಣ ಸೇರಿದಂತೆ ಅಗತ್ಯವಿರುವ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದರು.


    ಪ್ರಧಾನಿ ನರೇಂದ್ರ ಮೋದಿ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ದೇವಸ್ಥಾನಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸುವ ಮೂಲಕ ದೇವಾಲಯಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದರು.
    ರಾಜ್ಯ ಪುರಾತತ್ವ ಇಲಾಖೆಯ ಅಧಿಕಾರಿ ಶೇಜೇಶ್ವರ್, ತಹಶೀಲ್ದಾರ್ ಅರ್. ಪ್ರದೀಪ್, ಎಇಇ ದಯಾನಂದ್, ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥಶರ್ಮ, ಸಹಾಯಕ ಅರ್ಚಕ ಶ್ರೀನಿವಾಸ್, ನಗರಸಭಾ ಸದಸ್ಯರಾದ ಅನುಪಮ, ರವಿಕುಮಾರ್, ಮುಖಂಡರಾದ ಎಸ್. ದತ್ತಾತ್ರಿ, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್, ರಾಮಲಿಂಗಯ್ಯ, ನರಸಿಂಹಚಾರ್, ಚನ್ನೇಶ್, ಮಾರುತಿ, ಲತಾ, ಅನೂಷಾ ಹಾಗು ದೇವಸ್ಥಾನ ಸಮಿತಿಯ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment