ಕೆ. ಕೋಕಿಲಾ
ಭದ್ರಾವತಿ, ಸೆ. ೪ : ಈ ಬಾರಿ ೪ ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ತಾಲೂಕಿನ ಶಿಕ್ಷಕ ವೃಂದದವರಲ್ಲಿ ಸಂತಸವನ್ನುಂಟು ಮಾಡಿದೆ.
ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾಲೂಕಿನ ಹಡ್ಲಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಪಿ ಇಬ್ರಾಹಿಂ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಳೇನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಕೆ. ಕೋಕಿಲಾ, ಪ್ರೌಢಶಾಲಾ ವಿಭಾಗದಲ್ಲಿ ಅರಹತೊಳಲು ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಎನ್. ಅಣ್ಣಪ್ಪ ಹಾಗು ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ವಿಶೇಷ ಪ್ರಶಸ್ತಿಯನ್ನು ಅತ್ತಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎ.ಎಂ ಪ್ರಸನ್ನ ಪಡೆದುಕೊಂಡಿದ್ದಾರೆ.
ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment