ಶಿಶು ಅಭಿವೃದ್ಧಿ ಇಲಾಖೆ,ಆರೋಗ್ಯ ಇಲಾಖೆ, ಕಾನೂನು ಸೇವಾ ಪ್ರಾಧಿಕಾರಿ,ವಕೀಲರ ಸಂಘ ಸಂಯುಕ್ತವಾಗಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಸಪ್ತಾಹ ಉದ್ಘಾಟನೆಯನ್ನು ಸಿವಿಲ್ ಜಡ್ಜ್ ನ್ಯಾಯಾಧೀಶರಾದ ವಿ.ಎನ್.ಮಿಲನ ಉದ್ಘಾಟಿಸಿದರು.
ಭದ್ರಾವತಿ, ಸೆ. ೧೦: ಗರ್ಭಿಣಿ ಸ್ತ್ರೀಯರು ಉತ್ತಮ ಪೌಷ್ಟಿಕಾಂಶ ಆಹಾರ ಸೇವನೆ ಮಾಡುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ನ್ಯಾಯಾಧೀಶರಾದ ವಿ.ಎನ್.ಮಿಲನ ಹೇಳಿದರು.
ಅವರು ಶಿಶು ಅಭಿವೃದ್ಧಿ ಮತ್ತು ಆರೋಗ್ಯ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ ಹಾಗು ವಕೀಲರ ಸಂಘ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪೋಷಣ್ ಸಪ್ತಾಹ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಗರ್ಭಿಣಿ ಮಹಿಳೆಯರು ವೈದ್ಯರ ಸಲಹೆ ಜತೆಗೆ ಮನೆಯ ಹಿರಿಯರ ಸಲಹೆ ಪಡೆದು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಒಳಿತು ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ಅಶೋಕ್ ಮಾತನಾಡಿ, ಹಲವು ಉತ್ಕೃಷ್ಟ ಮಟ್ಟದ ಆಹಾರಗಳು ನಮ್ಮ ಮನೆಯಲ್ಲಿಯೇ, ಸುತ್ತಮುತ್ತಲ ಪರಿಸರದಲ್ಲಿಯೇ ಲಭ್ಯವಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಅಂಗನವಾಡಿ ಆಶಾ ಕಾರ್ಯಕರ್ತೆಯರು ಗರ್ಭಿಣಿ ಮಹಿಳೆಯರಿಗೆ ಅರಿವು ಮೂಡಿಸಬೇಕು. ಮಹಿಳೆಯರು ಗರ್ಭಾವಸ್ಥೆಗೆ ಕಾಲಿಟ್ಟ ತಕ್ಷಣ ನೋಂದಾಣಿ ಮಾಡಿಕೊಳ್ಳುವ ಮೂಲಕ ಆರೋಗ್ಯ ಇಲಾಖೆಯಿಂದ ತಾಯಿ ಮತ್ತು ಮಗುವಿಗೆ ಸಿಗುವ ಸೌಲಭ್ಯ ಪಡೆಯಬೇಕೆಂದರು.
ಸರ್ಕಾರಿ ಅಭಿಯೋಜಕ ತ್ಯಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಸಿಡಿಪಿಒ ಸಿ. ಸುರೇಶ್, ಪ್ರೇಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ವೇಳೆ ಅಂಗನವಾಡಿಗಳಿಗೆ ಅಗತ್ಯ ಇರುವ ಆರೋಗ್ಯ ಕಿಟ್ ವಿತರಣೆ ಮಾಡಲಾಯಿತು.
No comments:
Post a Comment