ಭದ್ರಾವತಿಯಲ್ಲಿ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ವತಿಯಿಂದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ್ ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ ಹಾಗು ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಬಿ.ಎಂ ನಾಸಿರ್‌ಖಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಸೆ. ೧೭ : ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ವತಿಯಿಂದ ವತಿಯಿಂದ ಶನಿವಾರ ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ ಹಾಗು ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.
ನ್ಯೂಟೌನ್ ಲಯನ್ಸ್‌ಕ್ಲಬ್ ಭವನದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಬಿ.ಎಂ ನಾಸಿರ್‌ಖಾನ್, ನೆಹರು ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್. ಶಶಿಕಲಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಆರ್ ದಯಾನಂದ ಮತ್ತು ಹಾಲಪ್ಪ ವೃತ್ತದ ನಿವಾಸಿ, ಅಭಿಯಂತರ ಬಾಬು ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨.೩೦ರ ವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಿತು. ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ಅಧ್ಯಕ್ಷ ಎಚ್.ವಿ ಶಿವರುದ್ರಪ್ಪ ಶಿಬಿರಕ್ಕೆ ಚಾಲನೆ ನೀಡಿದರು.
. ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆವಹಿಸಿದ್ದರು. ಲಯನ್ಸ್ ೩೧೭ಸಿ ಪ್ರಾಂತ್ಯ-೨, ವಲಯ-೨ರ ಅಧ್ಯಕ್ಷ ಕೆ.ವಿ ಚಂದ್ರಶೇಖರ, ಮಾಜಿ ಗೌರ‍್ನರ್ ಬಿ. ದಿವಾಕರ ಶೆಟ್ಟಿ, ಡಾ. ರವೀಂದ್ರನಾಥ ಕೋಠಿ, ಕೆ. ಮಂಜಪ್ಪ, ಖಜಾಂಚಿ ಜಿ.ಪಿ ದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment