ಭದ್ರಾವತಿ, ಸೆ. ೨೮ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೆ.೨೯ರಂದು ಪರಿಸರ ದಸರಾ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೭ ಗಂಟೆಗೆ ಮಾಧವಚಾರ್ ವೃತ್ತದ ಎಡ ಮತ್ತು ಬಲ ಬದಿಯ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಭದ್ರಾ ನದಿ ತಟದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಂತರ ೧೧ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಪರಿಸರ ಜನಜಾಗೃತಿ ಜಾಥಾ ಮತ್ತು ಕಲಾ ತಂಡಗಳಿಂದ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಲಿದೆ.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಸಂಜೆ ೬.೩೦ಕ್ಕೆ ಗಾಂಧಿ ಕಂಡ ಕನಸು ಸ್ವಚ್ಛತೆ ಕುರಿತು ನಗರಸಭಾ ಪೌರ ಕಾರ್ಮಿಕರಿಂದ ರೂಪಕ ಹಾಗು ಕಾಲಾಯ ತಸ್ಮೈ ನಮಃ ವಿಡಂಬನಾತ್ಮಕ ರೂಪಕ ನಗರಸಭೆ ಸಿಬ್ಬಂದಿಗಳಿಂದ ನಡೆಯಲಿದ್ದು, ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ರೂಪಕ ರಚಿಸಿ ನಿರ್ದೇಶಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಪೌರಾಯುಕ್ತ ಎಚ್.ಎಂ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment