ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ ಸರ್ಕಲ್)ಬಳಿ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ನಡೆಯಿತು.
ಭದ್ರಾವತಿ, ಸೆ. ೧೭: ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ ಸರ್ಕಲ್)ಬಳಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ನಡೆಯಿತು.
ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಂಡು ಬರಲಾಗಿದೆ. ವಿಸರ್ಜನೆ ಅಂಗವಾಗಿ ಅನ್ನಸಂತರ್ಪಣೆ ನೆರವೇರಿತು. ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಕುಣಿತ, ಮಂಗಳ ವಾದ್ಯ ಸೇರಿದಂತೆ ಇನ್ನಿತರ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಓಂ ಚಿತ್ತಾರ ಹಾಗು ಮಡಕೆ ಒಡೆಯುವ ಸ್ಪರ್ಧೆಯೊಂದಿಗೆ ಯುವಕರು ಕುಣಿದು ಸಂಭ್ರಮಿಸಿದರು.
ಕಲಾವಿದ ವಿಷ್ಣು ಅವರ ಆಂಜನೇಯ ಕಲಾಕೃತಿ ಮೆರವಣಿಗೆಯ ಆಕರ್ಷಕ ಕೇಂದ್ರ ಬಿಂದುವಾಗಿ ಕಂಡು ಬಂದಿತು. ಹಿರಿಯೂರು ಚಾನಲ್‌ನಲ್ಲಿ ಮೂರ್ತಿ ವಿಸರ್ಜಿಸಲಾಯಿತು.
No comments:
Post a Comment