ಅಮಾನತುಗೊಂಡಿರುವ ನ್ಯಾಯಾಬೆಲೆ ಅಂಗಡಿಗಳನ್ನು ವಜಾಗೊಳಿಸುವುದು, ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
ಭದ್ರಾವತಿ, ಸೆ. ೨೬: ಅಮಾನತುಗೊಂಡಿರುವ ನ್ಯಾಯಾಬೆಲೆ ಅಂಗಡಿಗಳನ್ನು ವಜಾಗೊಳಿಸುವುದು, ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
ಸರ್ಕಾರದ ಆದೇಶದ ಪ್ರಕಾರ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧೨ ಗಂಟೆವರೆಗೆ ಹಾಗು ಸಂಜೆ ೪ ರಿಂದ ರಾತ್ರಿ ೮ ಗಂಟೆವರೆಗೆ ಕಾರ್ಯ ನಿರ್ವಹಿಸಬೇಕು. ಮಂಗಳವಾರ ಹೊರತುಪಡಿಸಿ ಉಳಿದ ಎಲ್ಲಾ ದಿನ ಕಡ್ಡಾಯವಾಗಿ ತೆರೆದಿರಬೇಕು ಹಾಗು ಅಂಗಡಿ ಮುಂಭಾಗದಲ್ಲಿ ಸ್ಥಳೀಯ ಆಹಾರ ಇಲಾಖೆ ಅಧಿಕಾರಿಗಳ ದೂರವಾಣಿ ಸಂಖ್ಯೆ, ಜಾಗೃತಿ ಸಮಿತಿ ಸದಸ್ಯರ ಹೆಸರು, ಸಂಖ್ಯೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಾರ್ಯ ನಿರ್ವಹಿಸುವ ಸಮಯ ಮತ್ತು ರಜಾ ದಿನದ ಬಗ್ಗೆ ಕಪ್ಪು ಹಲಗೆಯ ಮೇಲೆ ನಮೂದಿಸಬೇಕು. ಆದರೆ ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ಕಾರದ ಆದೇಶಗಳನ್ನು ನ್ಯಾಯಬೆಲೆ ಅಂಗಡಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಯಿತು.
ಕಳೆದ ೩ ವರ್ಷಗಳಿಂದ ಈ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆಯ ನಗರ ಮತ್ತು ಗ್ರಾಮಾಂತರ ಭಾಗದ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು. ಅಮಾನತುಗೊಂಡಿರುವ ನಗರದ ೭ ನ್ಯಾಯಬೆಲೆ ಅಂಗಡಿಗಳನ್ನು ವಜಾಗೊಳಿಸುವುದು ಹಾಗು ಕೆಎಫ್‌ಎಸ್‌ಸಿಎಸ್ ಗೋದಾಮು ಭ್ರಷ್ಟಾಚಾರ ನಿಯಂತ್ರಿಸಬೇಕೆಂದು ಆಗ್ರಹಿಸಲಾಯಿತು.
ಜನತಾದಳ(ಸಂಯುಕ್ತ) ಕರ್ನಾಟಕ ವತಿಯಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಹಾಗು ಕೆಆರ್‌ಎಸ್ ಪಕ್ಷ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ಪ್ರಮುಖರಾದ eಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ರಘು ಸಂಕ್ಲಿಪುರ, ಬಾಬುದೀಪಕ್‌ಕುಮಾರ್ ಹಾಗು ಕೆಆರ್‌ಎಸ್ ಪಕ್ಷದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment