ಭದ್ರಾವತಿ, ಸೆ. ೧೮: ಶ್ರೀ ಕನ್ಯಕಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘದ ವತಿಯಿಂದ ಸೆ.೨೦ರಂದು ಬೆಳಿಗ್ಗೆ ೧೦ ಗಂಟೆಗೆ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ವಾಸವಿ ಮಹಲ್‌ನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸರ್ವ ಸದಸ್ಯರ ಸಭೆ ಮತ್ತು ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಘದ ೨೮ನೇ ವರ್ಷದ ಸರ್ವ ಸದಸ್ಯರ ಸಭೆಯ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದ್ದು, ಅಲ್ಲದೆ ಮಹಾಮಾರಿ ಕೊರೋನಾ ಮುನ್ನಚ್ಚರಿಕೆ ಕ್ರಮವಾಗಿ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮ ಸಹ ನಡೆಯಲಿದೆ. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment