ಭದ್ರಾವತಿ ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ಮಂಗಳವಾರ ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು.
ಭದ್ರಾವತಿ, ಸೆ. ೨೭: ಹಳೇನಗರ ಠಾಣೆ ಪೊಲೀಸರು ಮಂಗಳ ಬೆಳಿಗ್ಗೆ ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್'ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸರ ವಶಕ್ಕೆ ವಹಿಸಲಾಗಿದೆ ಎಂಬ ತಿಳಿದು ಬಂದಿದೆ.
ರಾಜ್ಯದಾದ್ಯಂತ ಬೆಳಗ್ಗಿನ ಜಾವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ದಾಳಿ ನಡೆಸಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ವಶಕ್ಕೆ ವಹಿಸಿ ತಹಸೀಲ್ದಾರ್‌ರವರು ಆದೇಶಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಬೆಳಗ್ಗಿನ ಜಾವ ಸುಮಾರು ೩ ಗಂಟೆ ಸಮಯದಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ ಎನ್ನಲಾಗಿದೆ.
ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಿ, ಸೆಕ್ಷನ್ ೧೦೭, ೧೫೧ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment