ಭದ್ರಾವತಿಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಜನ್ಮದಿನದ ಅಂಗವಾಗಿ ಪೋಷಣ್ ಮಿತ್ರ ಕಾರ್ಯಕ್ರಮದಡಿಯಲ್ಲಿ ಶನಿವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣೆ ನಡೆಯಿತು.
ಭದ್ರಾವತಿ, ಅ. ೧; ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಜನ್ಮದಿನದ ಅಂಗವಾಗಿ ಪೋಷಣ್ ಮಿತ್ರ ಕಾರ್ಯಕ್ರಮದಡಿಯಲ್ಲಿ ಶನಿವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣೆ ನಡೆಯಿತು.
ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಎಸ್.ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಣ್ಣ, ಜಯರಾಂ ನಾಯ್ಕ, ಪ್ರಭಾರ ಕಾರ್ಯದರ್ಶಿ ದೇವರಾಜನಾಯ್ಕ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಘು, ಕವಿತಾರಾವ್, ಆಶಾ ಪುಟ್ಟಸ್ವಾಮಿ, ಕವಿತಾ ಸುರೇಶ್, ಡಾ. ಪುಷ್ಪಲತಾ ಮತ್ತು ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷ ಪಿ. ಗಣೇಶ್‌ರಾವ್ ಸ್ವಾಗತಿಸಿದರು. ಆಶಾ ಮೆಂಟರ್ ವಸಂತ ನಿರೂಪಿಸಿದರು.
No comments:
Post a Comment