ನವರಾತ್ರಿ ಪ್ರಯುಕ್ತ ದಾಂಡಿಯಾ ಸ್ನೇಹ-ಮಿಲನ ಕಾರ್ಯಕ್ರಮ
ಭದ್ರಾವತಿಯಲ್ಲಿ ಸ್ತ್ರೀ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಬ್ಯೂಟಿಷಿಯನ್ ಮತ್ತು ಟೈಲರಿಂಗ್‌ರವರಿಂದ ನವರಾತ್ರಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಸ್ನೇಹ-ಮಿಲನ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಅ. ೧: ಸ್ತ್ರೀ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಬ್ಯೂಟಿಷಿಯನ್ ಮತ್ತು ಟೈಲರಿಂಗ್‌ರವರಿಂದ ನವರಾತ್ರಿ ಪ್ರಯುಕ್ತ ದಾಂಡಿಯಾ ಸ್ನೇಹ-ಮಿಲನ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಸಲಹೆಗಾರ ಬಿ.ಕೆ ಶ್ರೀನಾಥ್ ಮಾತನಾಡಿ, ದಾಂಡಿಯಾ ಕಾರ್ಯಕ್ರಮ ತನ್ನದೇ ಆದ ಪರಂಪರೆ, ವಿಶೇಷತೆಯನ್ನು ಹೊಂದಿದೆ. ದಾಂಡಿಯಾ ಪ್ರಮುಖ ಉದ್ದೇಶ ಎಲ್ಲರನ್ನು ಒಗ್ಗೂಡಿಸುವುದಾಗಿದೆ. ಹಿಂದೂ ಸಂಸ್ಕೃತಿಯಲ್ಲಿ ಯಾವುದೇ ಶುಭ ಕಾರ್ಯ ಕೈಗೊಳ್ಳುವ ಮೊದಲು ದಾಂಡಿಯಾ ನಡೆಸುವುದು ಆಚರಣೆಯಾಗಿ ಬಂದಿದೆ. ದಾಂಡಿಯಾ ಸ್ನೇಹ-ಮಿಲನ ಕಾರ್ಯಕ್ರಮದ ಮೂಲಕ ಎಲ್ಲಾ ಧರ್ಮದ, ಎಲ್ಲಾ ಜಾತಿ-ಜನಾಂಗದವರು ಒಗ್ಗೂಡಿ ನವರಾತ್ರಿ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಬ್ಯೂಟಿಷಿಯನ್ ಮತ್ತು ಟೈಲರಿಂಗ್ ಒಂದು ವಿಶಿಷ್ಟವಾದ ವೃತ್ತಿಯಾಗಿದ್ದು, ಈ ವೃತ್ತಿ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಒಕ್ಕೂಟದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ, ಅಸಂಘಟಿತ ಮಹಿಳಾ ಕಾರ್ಮಿಕರನ್ನು ಒಗ್ಗೂಡಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂಬ ಉದ್ದೇಶದಿಂದ ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಮಾರ್ಗದರ್ಶನದಲ್ಲಿ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ. ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸುವ ಜೊತೆಗೆ ಮಹಿಳೆಯರನ್ನು ಸಹ ಆರ್ಥಿಕವಾಗಿ ಸದೃಢಗೊಳಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಗಂಗಾಧರ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಪದ್ಮಾವತಿ, ಗಾಯತ್ರಿ, ಕಲಾ, ಸರಿತ, ನೇತ್ರಾ, ರೂಪಾ, ತೃಪ್ತಿ, ಶಶಿ, ಶಿಲ್ಪ, ಮಾಲಾ ಹಾಗು ಶಿಕಾರಿಪುರ, ಹೊನ್ನಾಳ್ಳಿ, ಶಿವಮೊಗ್ಗ, ತೀರ್ಥಹಳ್ಳಿ ಮತ್ತು ಸಾಗರ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ರೇಣುಕಾ ಪ್ರಾರ್ಥಿಸಿದರು. ಸುಮಿತ್ರಾ ಸ್ವಾಗತಿಸಿ, ಕವಿತಾ ನವೀನ್ ಮತ್ತು ವಿಜಯ್ ಸಿದ್ದಾರ್ಥ ನಿರೂಪಿಸಿದರು. ಮಕ್ಕಳು ಮತ್ತು ಮಹಿಳೆಯರಿಂದ ನೃತ್ಯ ವೇಷಭೂಷಣ ಸ್ಪರ್ಧೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿಯಲ್ಲಿ ಸ್ತ್ರೀ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಬ್ಯೂಟಿಷಿಯನ್ ಮತ್ತು ಟೈಲರಿಂಗ್‌ರವರಿಂದ ನವರಾತ್ರಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಸ್ನೇಹ-ಮಿಲನ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಮಹಿಳೆಯರಿಂದ ನೃತ್ಯ ವೇಷಭೂಷಣ ಸ್ಪರ್ಧೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
No comments:
Post a Comment