ಗೃಹ ಸಚಿವ ಅರಗಜ್ಞಾನೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ಇನ್ನಿತರರು ಭಾಗಿ
ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯ ಹಾಗು ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ ಸೋಮವಾರ ಗೃಹ ಸಚಿವ ಅರಗಜ್ಞಾನೇಂದ್ರ ನೆರವೇರಿಸಿದರು.
ಭದ್ರಾವತಿ, ಅ. ೧೦: ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯ ಹಾಗು ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ ಸೋಮವಾರ ಗೃಹ ಸಚಿವ ಅರಗಜ್ಞಾನೇಂದ್ರ ನೆರವೇರಿಸಿದರು.
ನಗರದ ಮಿಲ್ಟ್ರಿಕ್ಯಾಂಪ್ ಬೈಪಾಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಉದ್ಘಾಟನೆ, ೧೨ ಪೊಲೀಸ್ ವಸತಿಗೃಹಗಳನ್ನೊಳಗೊಂಡ ಸಮುಚ್ಛಯ ನಿರ್ಮಾಣಕ್ಕೆ ಹಾಗು ಹೊಸಮನೆ ಮುಖ್ಯ ರಸ್ತೆಯಲ್ಲಿ ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್, ನೂತನ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್, ಪೊಲೀಸ್ ವಿಭಾಗ ವ್ಯಾಪ್ತಿಯ ಸಹಾಯಕ ಪೊಲೀಸ್ ಅಧೀಕ್ಷಕರು, ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment