ಭದ್ರಾವತಿ, ಅ. ೨೯: ಶಿವಮೊಗ್ಗ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ರಾಜ್ಯ ಕ್ರೀಡಾಕೂಟಕ್ಕೆ ಜಿಲ್ಲಾ ತಂಡದ ಆಯ್ಕೆ ಪ್ರಕ್ರಿಯೆ ನ.೧ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಉತ್ತರಖಂಡ್ ರಾಜ್ಯದಲ್ಲಿ ನ.೧೭ ರಿಂದ ೨೦ರವರೆಗೆ ನಡೆಯಲಿರುವ ರಾಷ್ಟ್ರೀಯ ಜ್ಯೂನಿಯರ್ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲು ರಾಜ್ಯ ತಂಡದ ಆಯ್ಕೆ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಬಡ್ಡಿ ಸಂಸ್ಥೆ ವತಿಯಿಂದ ನ.೧೧ ರಿಂದ ೧೩ರವರೆಗೆ ರಾಜ್ಯ ಚಾಂಪಿಯನ್‌ಶಿಪ್ ಕಬಡ್ಡಿ ಕ್ರೀಡಾಕೂಟ ಬೆಂಗಳೂರಿನ ಆನೆಕಲ್ ತಾಲೂಕಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜಿಲ್ಲಾ ತಂಡ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಆಸಕ್ತ ಕ್ರೀಡಾಪಟು ಅಂದು ಬೆಳಿಗ್ಗೆ ೧೦ ಗಂಟೆಗೆ ಹಾಜರಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಕ್ರೀಡಾಪಟುಗಳು ೨೦ ವರ್ಷದೊಳಗಿನ ವಯೋಮಾನ ಹೊಂದಿರತಕ್ಕದ್ದು, ೭೦ ಕೆ.ಜಿ ತೂಕ ಮೀರಿರಬಾರದು. ಹೆಚ್ಚಿನ ಮಾಹಿತಿಗೆ ವೇಣುಗೋಪಾಲ, ಮೊ: ೯೮೪೪೪೨೦೯೫೦, ರವೀಂದ್ರ, ಮೊ: ೯೯೮೬೪೭೪೫೨೫, ಗೋಪಾಲಕೃಷ್ಣ, ಮೊ: ೯೪೪೯೨೩೯೨೧೫ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment