ಭದ್ರಾವತಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ಸಂಘ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ಸಂಘದ ಚುನಾವಣೆ ನ.೩ರಂದು ನಡೆಯುತ್ತಿದ್ದು, ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗು ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಮಂಗಳವಾರ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಭದ್ರಾವತಿ, ಅ. ೧೮ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ಸಂಘ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ಸಂಘದ ಚುನಾವಣೆ ನ.೩ರಂದು ನಡೆಯುತ್ತಿದ್ದು, ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗು ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಮಂಗಳವಾರ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ವಲಯ ಅಧ್ಯಕ್ಷ ಸ್ಥಾನಕ್ಕೆ ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎ.ಬಿ ಅನಿಲ್ ಕುಮಾರ್ ಹಾಗು ಕಾರ್ಯದರ್ಶಿ ಸ್ಥಾನಕ್ಕೆ ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಕೆ ಮೋಹನ್ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಹಲವು ಮಂದಿ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದಾರೆ.
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ ವಿಶ್ವನಾಥ್, ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಾಯ ಸರ್ಕಾರಿ ವಿಜ್ಞಾನ ಕಾಲೇಜಿನ ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment