ಭದ್ರಾವತಿ, ಅ. ೩೧ : ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನ.೧ರಂದು ಬೆಳಿಗ್ಗೆ ೧೧ ಗಂಟೆಗೆ ಸರ್ವಸದಸ್ಯರ ಸಭೆ ಹಾಗು ೬೭ನೇ ಕನ್ನಡ ರಾಜ್ಯೋತ್ಸವ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಲುವೇಗೌಡರು, ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ವೇದಿಕೆ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆವಹಿಸಲಿದ್ದಾರೆ.
No comments:
Post a Comment