ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ೨ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬುಧವಾರ ಭದ್ರಾವತಿ ತಾಲೂಕು ಬಲಜ ಸಂಘದ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಅ. ೧೯: ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ೨ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬುಧವಾರ ತಾಲೂಕು ಬಲಜ ಸಂಘದ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಬಲಿಜ ಸಮುದಾಯ ಈ ಹಿಂದೆ ಅಂದರೆ ೧೯೯೪ರಲ್ಲಿ ಶೈಕ್ಷಣಿಕ, ಆರ್ಥಿಕ, ಉದ್ಯೋಗ, ವಿದ್ಯಾಭ್ಯಾಸ ಸೇರಿದಂತೆ ಸರ್ಕಾರಿ ಸೌಲಭ್ಯಗಳನ್ನು ಮೀಸಲಾತಿ ಪ್ರವರ್ಗ ೨ಎ ಅಡಿಯಲ್ಲಿ ಅವಕಾಶ ಪಡೆಯಲಾಗಿತ್ತು. ಇದೆ ವರ್ಷ ಶೈಕ್ಷಣಿಕ ಕಾರಣಕ್ಕಾಗಿ ಪ್ರವರ್ಗ ೨ಎ ನಿಲಂಬನೆನೆಗೊಳಿಸಲಾಗಿದೆ. ಅಂದಿನಿಂದ ಇಂದಿನವರೆಗೆ ಕಳೆದ ಸುಮಾರು ೨೮ ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಆದರೂ ಸಹ ನಿಬಂಧನೆಗೊಳಿಸಿರುವ ಪ್ರವರ್ಗ ೨ಎ ಸೌಲಭ್ಯಗಳನ್ನು ನೀಡಿರುವುದಿಲ್ಲ ಎಂದು ಮನವಿಯಲ್ಲಿ ಅಳಲು ತೋರ್ಪಡಿಸಲಾಗಿದೆ.
೨೦೧೧ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪನವರು ಬಲಿಜ ಸಮುದಾಯಕ್ಕೆ ಪ್ರವರ್ಗ ೨ಎ ಅಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ಅನುಕೂಲ ಮಾಡಿಕೊಟ್ಟಿದ್ದು, ಆದರೆ ಉದ್ಯೋಗ, ಆರ್ಥಿಕ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಇದುವರೆಗೂ ಕಲ್ಪಿಸಿಕೊಟ್ಟಿರುವುದಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ೨ಎ ಅಡಿಯಲ್ಲಿ ಪೂರ್ಣ ಪ್ರಮಾಣದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಮನವಿ ಮಾಡಲಾಗಿದೆ.
ಸಂಘದ ಅಧ್ಯಕಷ ಜೆ.ಎಸ್ ಸಂಜೀವಮೂರ್ತಿ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು. ಗೌರವಾಧ್ಯಕ್ಷ ಎಸ್.ಎನ್ ಸುಬ್ರಮಣ್ಯ, ಉಪಾಧ್ಯಕ್ಷರಾದ ಎಸ್.ಬಿ ಜಂಗಮಪ್ಪ, ಶಕುಂತಲಾ, ಪ್ರಧಾನ ಕಾರ್ಯದರ್ಶಿ ಎಂ. ರಮೇಶ್, ಸಹ ಕಾರ್ಯದರ್ಶಿ ಟಿ. ರಮೇಶ್, ಖಜಾಂಚಿ ಬಿ.ಎ ನರೇಂದ್ರಬಾಬು, ಎಚ್.ಆರ್ ರಂಗನಾಥ್, ದಶರಥಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment