ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆರ್. ನಾಗರಾಜ ಆಯ್ಕೆಯಾಗಿದ್ದಾರೆ.
ಭದ್ರಾವತಿ, ಅ. ೧೨ : ತಾಲೂಕಿನ ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಆರ್. ನಾಗರಾಜ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ಎನ್.ಎಚ್ ಮಹೇಶ್‌ರವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಆರ್. ನಾಗರಾಜ ಆಯ್ಕೆಯಾದರು.
ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ(ಎಸ್.ಟಿ) ತಾಲೂಕು ಘಟಕದ ಅಧ್ಯಕ್ಷ, ಗ್ರಾಮದ ಮುಖಂಡ ಎಸ್. ಮಹಾದೇವ ಕೂಡ್ಲಿಗೆರೆ ನೂತನ ನಿರ್ದೇಶಕ ಆರ್. ನಾಗರಾಜ ಅವರನ್ನು ಅಭಿನಂದಿಸಿದ್ದಾರೆ.
No comments:
Post a Comment