ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಜಿ. ಆನಂದಕುಮಾರ್, ಆರ್. ಕರುಣಾಮೂರ್ತಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಅ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಆರ್. ಕರುಣಾಮೂರ್ತಿ, ಜಯರಾಂ ಗೊಂದಿ, ಶ್ರೀ ನಂಜುಂಡೇಶ್ವರ ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ನಂಜುಂಡಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಪ್ರಕಾಶ್, ಮಾಧವ, ನಾಗತಿಬೆಳಗಲು ಗ್ರಾಮಪಂಚಾಯಿತಿ ಉಪಾಧ್ಯಕ್ಷ ದಿನೇಶ್, ಒಕ್ಕೂಟದ ಅಧ್ಯಕ್ಷೆ ಭಾರತಿ, ಮೇಲ್ವಿಚಾರಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment