೭ ತಾಲೂಕುಗಳಿಂದ ಒಟ್ಟು ೧೭೨ ವಿದ್ಯಾರ್ಥಿಗಳು, ೨ ತಂಡ ಆಯ್ಕೆ
ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗು ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಮಂಗಳವಾರ ಭದ್ರಾವತಿ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ೧೪ ಮತ್ತು ೧೭ ವರ್ಷ ವಯೋಮಿತಿಯೊಳಗಿನ ಬಾಲಕರ ಕ್ರಿಕೆಟ್ ಆಯ್ಕೆ ಟ್ರಯಲ್ಸ್ ೨೦೨೨-೨೩ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಚಾಲನೆ ನೀಡಿದರು.
ಭದ್ರಾವತಿ, ಅ. ೧೮ : ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗು ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಮಂಗಳವಾರ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ೧೪ ಮತ್ತು ೧೭ ವರ್ಷ ವಯೋಮಿತಿಯೊಳಗಿನ ಬಾಲಕರ ಕ್ರಿಕೆಟ್ ಆಯ್ಕೆ ಟ್ರಯಲ್ಸ್ ೨೦೨೨-೨೩ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಚಾಲನೆ ನೀಡಿದರು.
ಜಿಲ್ಲೆಯ ಒಟ್ಟು ೭ ತಾಲೂಕುಗಳಿಂದ ಒಂದು ಶಾಲೆಯಿಂದ ತಲಾ ೪ ಮಕ್ಕಳಂತೆ ಒಟ್ಟು ಸುಮಾರು ೧೭೨ ಮಕ್ಕಳು ಭಾಗವಹಿಸಿದ್ದರು. ನಾಗರಾಜ್ ಮುಖ್ಯ ಆಯ್ಕೆಗಾರರಾಗಿದ್ದು, ಒಟ್ಟು ೨ ತಂಡಗಳನ್ನು ಆಯ್ಕೆ ಮಾಡಲಾಯಿತು. ಈ ತಂಡಗಳು ಬೆಂಗಳೂರು ವಿಭಾಗಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.
ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಪ್ರಭು, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಾಲಾಕ್ಷಪ್ಪ, ಗೌರವಾಧ್ಯಕ್ಷ ಅಪೇಕ್ಷ ಮಂಜುನಾಥ್, ಕಾರ್ಯದರ್ಶಿ ಶ್ರೀಧರ್ ಸಾವಂತ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ವ್ಯಕ್ತಿ ನವೀದ್ ಪರ್ವೀಜ್ ಅಹಮದ್, ದೈಹಿಕ ಶಿಕ್ಷಕರಾದ ಸಂತೋಷ್, ನಾಗೇಶ್ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
No comments:
Post a Comment