ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಆಯುಧ ಪೂಜೆ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಅ. ೫: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಆಯುಧ ಪೂಜೆ ವಿಜೃಂಭಣೆಯಿಂದ ಜರುಗಿತು.
ನಗರದ ವಿವಿಧೆಡೆ ಪಂಪ್ ಹೌಸ್‌ಗಳಲ್ಲಿ, ತರೀಕೆರೆ ರಸ್ತೆಯ ನಗರಸಭೆ ಮುಂಭಾಗ ತ್ಯಾಜ್ಯ ವಿಲೇವಾರಿ ವಾಹನಗಳು, ಮುಕ್ತಿ ವಾಹಿನಿ ಸೇರಿದಂತೆ ಎಲ್ಲಾ ವಾಹನಗಳಿಗೆ ಹಾಗು ಸ್ವಚ್ಛತಾ ಪರಿಕರಗಳಿಗೆ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ಸೇವಾಕರ್ತರಾದ ರಮಾಕಾಂತ್, ನರಸಿಂಹಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment