ಭದ್ರಾವತಿ ಚನ್ನಗಿರಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಮ್ಯಾಮ್ಕೋಸ್ ಕಟ್ಟಡದ ಸಮೀಪ ಅ.೨೪ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಭದ್ರಾವತಿ, ಅ. ೨೮ : ನಗರದ ಚನ್ನಗಿರಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಮ್ಯಾಮ್ಕೋಸ್ ಕಟ್ಟಡದ ಸಮೀಪ ಅ.೨೪ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಾಚಗೂಂಡನಹಳ್ಳಿ ನಿವಾಸಿ ಕುಶಾಲ್(೩೫) ಹಾಗೂ ನಗರಸಭೆ ವ್ಯಾಪ್ತಿಯ ಹುತ್ತಾ ಕಾಲೋನಿ ನಿವಾಸಿ ಸೋಮಶೇಖರ್ ಅಲಿಯಾಸ್ ಪುಟ್ಟ ಅಲಿಯಾಸ್ ಕಪ್ಪೆ(೩೩) ಬಂಧಿತರಾಗಿದ್ದಾರೆ.
ಮ್ಯಾಮ್ಕೋಸ್ ಕಟ್ಟಡದ ಸಮೀಪ ಖಾಲಿ ಜಾಗದಲ್ಲಿ ರೂಪೇಶ್‌ಕುಮಾರ್(೪೫) ಎಂಬಾತನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹಳೇನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಕೃತ್ಯ ಬಯಲಾಗಿದ್ದು, ಬಂಧಿತ ಇಬ್ಬರು ರೂಪೇಶ್‌ಕುಮಾರ್ ಸ್ನೇಹಿತರು ಎನ್ನಲಾಗಿದೆ.
ಶಿವಮೊಗ್ಗದಲ್ಲಿ ಆಟೋ ಚಾಲಕನಾಗಿದ್ದ ರೂಪೇಶ್‌ಕುಮಾರ್ ತಾಲೂಕಿನ ಹೊಳೆಹೂನ್ನೂರು ನಿವಾಸಿಯಾಗಿದ್ದು, ಈತನನ್ನು ಅಂದು ನಗರಕ್ಕೆ ಕರೆಸಿಕೊಂಡಿದ್ದ ಈ ಇಬ್ಬರು ಸ್ನೇಹಿತರು ಹಳೇದ್ವೇಷದ ಹಿನ್ನಲೆಯಲ್ಲಿ ಬಿದಿರಿನ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.
ಪೊಲೀಸ್ ನಗರವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಹಳೇನಗರ ಠಾಣಾಧಿಕಾರಿ ಹಾಗು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿದ್ದು, ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅಭಿನಂದಿಸಿದ್ದಾರೆ.
No comments:
Post a Comment