ಭದ್ರಾವತಿಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಅ. ೧೨ : ನಗರದ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗ್ರಾಮಾಂತರ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿದ ಗೃಹ ಸಚಿವರನ್ನು ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್ ಹಿಂದೂ ಮಹಾಸಭಾ ಗಣಪತಿ ಭಾವಚಿತ್ರ ನೀಡಿ ಸನ್ಮಾನಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪ್ರಮುಖರಾದ ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಕೆ. ಮಂಜುನಾಥ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment