ಧರ್ಮಲಿಂಗಂ
ಭದ್ರಾವತಿ, ಅ. ೧೪ : ನಗರದ ಸೆವೆನ್ಸ್ ಕಬಡ್ಡಿ ತಂಡದ ಹಿರಿಯ ಆಟಗಾರ, ಸುರುಗಿತೋಪು ನಿವಾಸಿ ಧರ್ಮಲಿಂಗಂ(೬೫) ನಿಧನ ಹೊಂದಿದರು.
ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ಧರ್ಮಲಿಂಗಂ ಎಂಪಿಎಂ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶಕರಾಗಿದ್ದರು.
ಇವರ ಅಂತ್ಯಕ್ರಿಯೆ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಶುಕ್ರವಾರ ಸಂಜೆ ನೆರವೇರಿತು. ಇವರ ನಿಧನಕ್ಕೆ ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ ಎಚ್.ಆರ್ ರಂಗನಾಥ್ ಸೇರಿದಂತೆ ಕಬಡ್ಡಿ ಕ್ರೀಡಾಪಟುಗಳು ಸಂತಾಪ ಸೂಚಿಸಿದ್ದಾರೆ.
No comments:
Post a Comment