ಈ ಬಾರಿ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವ-೨೦೨೨ರ ಅಂಗವಾಗಿ ವೀರ ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಶುಕ್ರವಾರ ಭದ್ರಾವತಿ ನಗರಕ್ಕೆ ಆಗಮಿಸಿತು.
ಭದ್ರಾವತಿ, ಅ. ೭ : ಈ ಬಾರಿ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವ-೨೦೨೨ರ ಅಂಗವಾಗಿ ವೀರ ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಶುಕ್ರವಾರ ನಗರಕ್ಕೆ ಆಗಮಿಸಿತು.
ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಆಗ್ನಿಶಾಮಕ ಠಾಣೆ ಆವರಣದಲ್ಲಿ ತಾಲೂಕಿನ ನಾಗರೀಕರ ಪರವಾಗಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭೆ ತಾಲೂಕು ಘಟಕದ ರೇವಪ್ಪ, ವಾಗೀಶ್, ಜಗದೀಶ್ ಪಾಟೀಲ್, ಸತೀಶ್, ಪ್ರಕಾಶ್ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು ಸ್ವಾಗತಿಸಿದರು. ಪೊಲೀಸ್ ಇಲಾಖೆ ಹಾಗು ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment