ಕಳೆದ ಕೆಲವು ವರ್ಷಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಃ ಆರಂಭಿಸಬೇಕು. ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಬೇಕೆಂದು ಬಳ್ಳಾರಿ ಬಿಷಪ್ ಹೌಸ್ ಮುಂಭಾಗದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕಥ್ರುಫಲಕಗಳನ್ನು ಪ್ರದರ್ಶಿಸಿ ಆಗ್ರಹಿಸಲಾಯಿತು.
ಭದ್ರಾವತಿ, ಅ. ೧೫ : ಬಳ್ಳಾರಿಯಲ್ಲಿ ಒಂದೆಡೆ ರಾಹುಲ್‌ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಮತ್ತೊಂದೆಡೆ ಯಾತ್ರೆಯಲ್ಲಿ ಪಾಲ್ಗೊಂಡಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಹಾಗು ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಎಂಪಿಎಂ ಕಾರ್ಖಾನೆ ಪುನಃ ಆರಂಭಿಸಬೇಕು. ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಬೇಕೆಂದು ಬಳ್ಳಾರಿ ಬಿಷಪ್ ಹೌಸ್ ಮುಂಭಾಗದಲ್ಲಿ ಫಲಕಗಳನ್ನು ಪ್ರದರ್ಶಿಸಿ ಆಗ್ರಹಿಸಲಾಯಿತು.
ವಿಧಾನಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ವಕ್ತಾರ ಅಮೋಸ್, ಹಿಂದುಳಿದ ವರ್ಗದಗಳ ಘಟಕದ ನಗರ ಅಧ್ಯಕ್ಷ ಬಿ. ಗಂಗಾಧರ್, ಅಸಂಘಟಿತ ಗ್ರಾಮಾಂತರ ಘಟಕದ ಅಧ್ಯಕ್ಷ ಕೃಷ್ಣನಾಯ್ಕ, ದಲಿತ ಮುಖಂಡ ನರಸಿಂಹ ಮೂರ್ತಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸತೀಶ್, ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳಾದ ಜಗದೀಶ್, ಹರ್ಷ, ಹರೀಶ್, ಸಂತೋಷ್, ಕುಪೇಂದ್ರ, .ಗಣೇಶ್ ಮುಂತಾದವರು ಉಪಸ್ಥಿತರಿದ್ದರು.
No comments:
Post a Comment