ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಭದ್ರಾವತಿ, ಅ. ೫ : ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ನಾಡಹಬ್ಬ ದಸರಾ ಕೊನೆಯ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಬೆಂಗಳೂರಿನ ಗಿಜ್ಜಿ ಗಿಲಿ-ಗಿಲಿ ಕಾರ್ಯಕ್ರಮ ತಂಡದ ಕಲಾವಿದರಿಂದ ನೆರವೇರಿತು. ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.
ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೌರಾಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಹಾಸ್ಯ-ಲಾಸ್ಯ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.
No comments:
Post a Comment