ಭದ್ರಾವತಿ, ಅ. ೧೮ : ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ ಯುವ ಪಡೆ, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ‍್ಸ್ ಸೆಂಟ್ರಲ್ ಯೂನಿಯನ್, ಬಾಪೂಜಿ ವಿದ್ಯಾಸಂಸ್ಥೆ ಹಾಗು ಗ್ಲೋಬಲ್ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸ್ಮರಣಾರ್ಥ ಅ.೧೯ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಹೊಸಮನೆ ಅಶ್ವಥ್ ನಗರ, ಗ್ಲೋಬಲ್ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಆಯೋಜಿಸಲಾಗಿರುವ ಶಿಬಿರದಲ್ಲಿ ಎದೆನೋವು, ರಕ್ತದ ಒತ್ತಡ, ಆಯಾಸ, ಅತಿಯಾದ ಬೆವರುವಿಕೆ, ಎದೆಯಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ, ನರಗಳ ಸವೆತ, ನರಗಳ ದೌರ್ಬಲ್ಯ, ಬೆನ್ನು ಮತ್ತು ಕತ್ತಿನ ನರಗಳ ಸಮಸ್ಯೆ, ನರರೋಗ ತಜ್ಞರೊಂದಿಗೆ ಸಮಾಲೋಚನೆ, ಭುಜದ ಮೂಳೆ, ಕೀಲು ಮತ್ತು ಮೂಳೆ, ಬೆನ್ನು ನೋವು, ಸೊಂಟ ನೋವು ಮತ್ತು ಮಂಡಿ ಸವೆತದ ತಪಾಸಣೆ ಜರುಗಲಿವೆ. ಹೆಚ್ಚಿನ ಮಾಹಿತಿಗೆ ಮೊ: ೯೯೮೬೭೫೯೪೮೬/೮೬೬೦೮೮೨೦೧೧/೯೮೪೪೭೭೧೨೧೨ ಕರೆ ಮಾಡಬಹುದಾಗಿದೆ.
No comments:
Post a Comment