ಭದ್ರಾವತಿ, ಅ. ೨೦ : ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ ಗ್ರಾಮಕ್ಕೆ ಗುರುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿದರು.
ಈ ಭಾಗದ ನಗರಸಭಾ ಸದಸ್ಯೆ ನಾಗರತ್ನ ಅನಿಲ್‌ಕುಮಾರ್ ಹಾಗು ಸ್ಥಳೀಯ ಪ್ರಮುಖರು ಮತ್ತು ರೈತರು ಬುಧವಾರ ಕಾಡಾ ಕಛೇರಿ ತೆರಳಿ ಅಧ್ಯಕ್ಷರನ್ನು ಭೇಟಿಯಾಗಿ ಖುದ್ದಾಗಿ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಭೇಟಿ ನೀಡಿ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿದರು.
ಗ್ರಾಮದ ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಪಡಿಸುವ ಸಂಬಂಧ ಮನವಿ ಸ್ವೀಕರಿಸಿದರು. ಶನೇಶ್ವರ ಮತ್ತು ಆದಿಶಕ್ತಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಭಜನಾ ಮಂಡಳಿ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸ ಸಿದ್ದಾಪುರ ಗ್ರಾಮಕ್ಕೆ ಗುರುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿದರು.
No comments:
Post a Comment