ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಹೊಸ ಸಿದ್ದಾಪುರ ಗ್ರಾಮದಲ್ಲಿ ಮಂಗಳವಾರ ನಡೆದ ಶ್ರೀ ಮಹಾಗಣಪತಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಅ. ೧೧: ನಗರಸಭೆ ವಾರ್ಡ್ ನಂ.೨೯ರ ಹೊಸ ಸಿದ್ದಾಪುರ ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದ ಸಮುದಾಯ ಭವನ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಠ-ಮಂದಿರ, ಸಂಘ-ಸಂಸ್ಥೆಗಳ ಸಮುದಾಯ ಭವನ ನಿರ್ಮಾಣಕ್ಕೆ ಬಿ.ಎಸ್ ಯಡಿಯೂರಪ್ಪನವರ ಕೊಡುಗೆ ಅಪಾರವಾಗಿದೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಸುಮಾರು ೬೦ ರಿಂದ ೭೦ ಕೋ. ರು. ಅನುದಾನ ತಮ್ಮ ಅಧಿಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಿದ್ದರು ಎಂದರು.
ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ನಗರಸಭಾ ಸದಸ್ಯೆ ನಾಗರತ್ನ ಅನಿಲ್‌ಕುಮಾರ್, ಶ್ರೀ ಮಹಾಗಣಪತಿ ದೇವಸ್ಥಾನ ಧಾರ್ಮಿಕ ಸೇವಾ ಟ್ರಸ್ಟ್ ಅಧ್ಯಕ್ಷ ಮೈಲಾರಪ್ಪ, ಬಿಜೆಪಿ ಪ್ರಮುಖರಾದ ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment