ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಾರ್ವತಿ ಬಾಯಿ ನಂಜಾನಾಯ್ಕ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಭದ್ರಾವತಿ, ಅ. ೧೦: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಾರ್ವತಿ ಬಾಯಿ ನಂಜಾನಾಯ್ಕ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಪಂಚಾಯಿತಿಯಲ್ಲಿ ಮೀಸಲಾತಿಗೆ ಅನುಗುಣವಾಗಿ ಸದಸ್ಯರು ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು, ಒಪ್ಪಂದದಂತೆ ಉಮಾದೇವಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಪಾರ್ವತಿ ಬಾಯಿ ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಗೌಡ, ಮಾಜಿ ಅಧ್ಯಕ್ಷರಾದ ಉಮಾದೇವಿ, ಮಲಕ್ ವೀರಪ್ಪನ್, ಜಯಣ್ಣ ಮಾಜಿ ಉಪಾಧ್ಯಕ್ಷ ಕುಬೇರ್ ನಾಯ್ಕ, ಸದಸ್ಯರಾದ ಸ್ವಾಮಿನಾಥನ್, ರುದ್ರೇಶ್, ವಿಶ್ವನಾಥ್, ನೀಲಾಬಾಯಿ, ಗೌರಮ್ಮ, ಸಿದ್ದಮ್ಮ, ಭಾಗ್ಯಮ್ಮ ವಿ.ಎಸ್.ಎಸ್.ಎನ್ ಅಧ್ಯಕ್ಷ ಎನ್.ಎಚ್ ಮಹೇಶ್, ಗ್ರಾಮದ ಪ್ರಮುಖರಾದ ಕಿರ್ಯಾನಾಯ್ಕ, ಟಾಕ್ರ ನಾಯ್ಕ, ದೇವೇಂದ್ರಪ್ಪ, ವೀರಪ್ಪನ್, ತಿಪ್ಪೇಶ್, ನಾಗೇಶ್, ರಾಮಚಂದ್ರಪ್ಪ, ಅರಕೆರೆ ಲಕ್ಷ್ಮೀಪತಿ, ಪ್ರವೀಣ್ ನಾಯ್ಕ ಹಾಗು ಕೋಡಿಹಳ್ಳಿ, ಕಲ್ಪನಹಳ್ಳಿ ಹಾಗೂ ಕೂಡ್ಲಿಗೆರೆಯ ಗ್ರಾಮಸ್ಥರು ಉಪಸ್ಥಿತರಿದ್ದರು.
No comments:
Post a Comment