ಭದ್ರಾವತಿಯಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಜಮೀರ್ ಎಂಬ ಯುವಕನ ಶವ ಸೋಮವಾರ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಇದು ಹತ್ಯೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ನಡುವೆ ಆರೋಪಿಗಳನ್ನು ತತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ರಂಗಪ್ಪ ವೃತ್ತ ಹಾಗೂ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆನಡೆಸಾಯಿತು.
ಭದ್ರಾವತಿ, ಅ. ೩: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಜಮೀರ್ ಎಂಬ ಯುವಕನ ಶವ ಸೋಮವಾರ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಇದು ಹತ್ಯೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಟಿವಿ ಅಂಗಡಿಯೊಂದರಲ್ಲಿ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದ ಜಮೀರ್ ಟಿವಿ ರಿಪೇರಿ ಮಾಡಲು ತೆರಳಿದ್ದು, ಎರಡು ದಿನಗಳ ಹಿಂದೆ ಕಾಣೆಯಾಗಿದ್ದ. ತರೀಕರೆ ರಸ್ತೆಯ ಅಯ್ಯಪ್ಪ ದೇವಾಲಯದ ಹಿಂಭಾಗದ ಭದ್ರಾ ನದಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಹತ್ಯೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೊಸಮನೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀರ್ ಮೃತದೇಹವನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.
ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ:
ಘಟನೆ ಹಿನ್ನೆಲೆಯಲ್ಲಿ ನೂರಾರು ಮಂದಿ ರಂಗಪ್ಪ ವೃತ್ತ ಹಾಗೂ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದ್ದು, ಜಮೀರ್ ಸಾವಿಗೆ ನ್ಯಾಯ ಒದಗಿಸಬೇಕು. ಆರೋಪಿಗಳನ್ನು ತತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
No comments:
Post a Comment