ಭದ್ರಾವತಿ: ನಗರಸಭೆ ವತಿಯಿಂದ ನ.10ರಂದು ಬೆಳಗ್ಗೆ 11 ಗಂಟೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅಭಿಯಾನಕ್ಕೆ ಚಲನಚಿತ್ರ ನಟಿ, ನಗರ ಸಭೆ ಸ್ವಚ್ಛತಾ ರಾಯಭಾರಿ ಆಶಾ ಭಟ್ ಉದ್ಘಾಟಿಸುವರು.
ಅಭಿಯಾನ ನಗರದ ಬಿ.ಹೆಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಆರಂಭಗೊಳ್ಳಲಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಭಿಯಾನ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಮನು ಕುಮಾರ್ ಕೋರಿದ್ದಾರೆ.
No comments:
Post a Comment