ಭದ್ರಾವತಿಯಲ್ಲಿ ಬಿಜೆಪಿ ಯುವ ಮುಖಂಡ, ನ್ಯಾಯವಾದಿ ಮಂಗೋಟೆ ರುದ್ರೇಶ್‌ರವರ ಹುಟ್ಟುಹಬ್ಬ ಆಚರಣೆಯಲ್ಲಿ ಸಂಸದ ಬಿ.ವೈ ರಾಘವೇಂದ್‌ರ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ನ. ೧ ; ಅಧಿಕಾರ ಯಾರಿಗೂ ಶಾಶ್ವತವಲ್ಲ. ನಾವು ಮಾಡುವ ಸೇವೆ ಬಹಳ ಮುಖ್ಯ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಮಂಗಳವಾರ ಬಿಜೆಪಿ ಯುವ ಮುಖಂಡ, ನ್ಯಾಯವಾದಿ ಮಂಗೋಟೆ ರುದ್ರೇಶ್‌ರವರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರಲ್ಲೂ ಸೇವೆ ಮಾಡುವ ಮನೋಭಾವವಿರಬೇಕು. ರಾಜಕೀಯ ಕ್ಷೇತ್ರವನ್ನೂ ಸಹ ಸೇವೆಗಾಗಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸೇವೆಯನ್ನು ಪ್ರಾಮಾಣಿಕವಾಗಿ ಕೈಗೊಂಡಲ್ಲಿ ಸೂಕ್ತ ಸಮಯದಲ್ಲಿ ಲಭಿಸಬೇಕಾದ ಸ್ಥಾನಮಾನಗಳು ತಾನಾಗಿಯೇ ಬರಲಿವೆ ಎಂದರು.
ಮಂಗೋಟೆ ರುದ್ರೇಶ್‌ರವರು ಆರಂಭದಿಂದಲೂ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂಬ ವಿಶ್ವಾಸ ಹೊಂದಿದ್ದೇನೆ ಎಂದರು.
ಶಿವಮೊಗ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಮುಖರಾದ ನಗರಸಭೆ ಸದಸ್ಯೆ ಅನುಪಮ ಚನ್ನೇಶ್, ಅನಿತಾ ಮಲ್ಲೇಶ್, ಮಾಜಿ ಸದಸ್ಯ ಜಿ. ಆನಂದಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ದುಗ್ಗೇಶ್ ತೇಲ್ಕರ್, ಪ್ರಮುಖರಾದ ಬಿ.ಎಸ್ ಶ್ರೀನಾಥ್, ಗೋಕುಲ್ ಕೃಷ್ಣ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಬೂತ್‌ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment