ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ದಾಸ ಶ್ರೇಷ್ಠ ಕನಕದಾಸರ ಮತ್ತು ವೀರವನಿತೆ ಓನಕೆ ಓಬವ್ವ ಜಯಂತೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಮೆರವಣಿಗೆ ಸಂಗಮೇಶ್ವರ್ ಚಾಲನೆ ನೀಡಿದರು.
ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಿಂದ ಆರಂಭಗೊಂಡ ಮೆರವಣಿಗೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ತಲುಪಿತು.
ತಹಸೀಲ್ದಾರ್ ಆರ್ ಪ್ರದೀಪ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಅಧ್ಯಕ್ಷ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್ ಹಾಗು ಸದಸ್ಯರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಕುರುಬ ಸಮಾಜ, ಸಂಗೊಳ್ಳಿ ರಾಯಣ್ಣ ಯುವ ಪಡೆ, ಕನಕ ಯುವ ಪಡೆ, ಕನಕ ಪತ್ತಿನ ಸಹಕಾರ ನಿಯಮಿತ, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment