ಕೃಷ್ಣಮೂರ್ತಿ
ಭದ್ರಾವತಿ, ನ. ೩ : ನಗರದ ಸುರಗಿತೋಪು ೨ನೇ ಕ್ರಾಸ್ ನಿವಾಸಿ ಕೃಷ್ಣಮೂರ್ತಿ(ಬೆಣ್ಣೆ)(೩೮) ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಇದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ ಬೈಪಾಸ್ ರಸ್ತೆ, ಬುಳ್ಳಾಪುರ ಶಂಕರಪ್ಪ ಕಟ್ಟೆ ಸಮೀಪದ ಶ್ರೀ ಸತ್ಯಹರಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.
ಇವರ ನಿಧನಕ್ಕೆ ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಜಯಶೀಲ ಸುರೇಶ್, ಕಾಂಗ್ರೆಸ್ ಮುಖಂಡರಾದ ಜಯರಾಜ್, ಮಹೇಶ್, ಬಿಜೆಪಿ ಮುಖಂಡರಾದ ಛಲವಾದಿ ಕೃಷ್ಣ ಸೇರಿದಂತೆ ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment