ಭದ್ರಾವತಿ, ನ. 17: ದಾಸ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡದೆ ಅವಮಾನ ಮಾಡಲಾಗಿದೆ ಎಂದು ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವಿರುದ್ಧ ಕೆಲವರು ಅಪಪ್ರಚಾರ ನಡೆಸಿ ಸುಳ್ಳು ಆರೋಪ ಮಾಡಿದ್ದಾರೆಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತ ತಿಳಿಸಿದ್ದಾರೆ.
ದಾಸ ಶ್ರೇಷ್ಠರಾದ ಕನಕದಾಸರ ಬಗ್ಗೆ ನಮಗೂ ಗೌರವ, ಭಕ್ತಿ ಹಾಗು ಶ್ರದ್ಧೆ ಇದ್ದು, ನ.11ರಂದು ಅನ್ಯ ಕಾರ್ಯ ನಿಮಿತ್ತ ಪಂಚಾಯಿತಿ ಕಚೇರಿಯಲ್ಲಿ ಸದಸ್ಯರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಬೆಳಿಗ್ಗೆಯೇ ಕನಕ ಜಯಂತಿ ಆಚರಣೆ ಮಾಡಿದ್ದು, ಈ ವಿಚಾರ ಗ್ರಾಮಸ್ಥರ ಗಮನಕ್ಕೆ ಬಂದಿರುವುದಿಲ್ಲ. ಇದನ್ನು ದುರ್ಬಳಕೆ ಮಾಡಿಕೊಂಡು ಕೆಲವರು ಪಂಚಾಯತಿ ವಿರುದ್ಧ ಅಪಪ್ರಚಾರ ನಡೆಸುವ ಮೂಲಕ ಸುಳ್ಳು ಆರೋಪ ಮಾಡಿದ್ದಾರೆಂದು ಅಧ್ಯಕ್ಷೆ ಶ್ವೇತ ಜೊತೆಗೆ ಸದಸ್ಯರಾದ ಸರೋಜಮ್ಮ, ಸಂಗಮ್ಮ, ಸುಮಿತ್ರ, ಚಂದ್ರಶೇಖರ್, ಚೇತನ್ ಮತ್ತು ಸರೋಜ ಸ್ಪಷ್ಟಪಡಿಸಿದ್ದಾರೆ.
No comments:
Post a Comment