ಆನಂದನ್
ಭದ್ರಾವತಿ, ನ.೨: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಉದ್ಯೋಗಿ ಆನಂದನ್(೫೧) ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಕಾಗದನಗರ ೧ನೇ ವಾರ್ಡ್ ಅಧಿಕಾರಿಗಳ ವಸತಿ ಗೃಹದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ಈ ದಂಪತಿ ಮಕ್ಕಳಿಲ್ಲದ ಕಾರಣ ಮಗುವೊಂದನ್ನು ದತ್ತು ಪಡೆದಿದ್ದರು. ಕಾರ್ಖಾನೆಯ ಪಲ್ಪ್ ಮಿಲ್-೨ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದನ್ ೨೦೧೭ರಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಉಳಿದುಕೊಂಡಿದ್ದರು. ಕಳೆದ ೩ ವರ್ಷಗಳಿಂದ ಎಂಪಿಎಂ ಜೆಂಟ್ಸ್ ರಿಕ್ರಿಯೇಷನ್ ಕ್ಲಬ್ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದಲ್ಲಿರುವ ಕ್ರೈಸ್ತರ ಸಮಾಧಿಯಲ್ಲಿ ನಡೆಯಲಿದೆ.
೧೫ ವರ್ಷಗಳಿಂದ ಬೀದಿನಾಯಿಗಳಿಗೆ ಅನ್ನ :
ಕಳೆದ ಸುಮಾರು ೧೫ ವರ್ಷಗಳಿಂದ ಆನಂದನ್‌ರವರು ಕಾರ್ಖಾನೆ ಒಳಭಾಗದಲ್ಲಿ ಹಾಗು ಕಾಗದನಗರ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಬೆಳಿಗ್ಗೆ, ರಾತ್ರಿ ಅನ್ನ ಹಾಕುವ ಮೂಲಕ ಮಾನವೀಯತೆ ಮೆರೆದಿದ್ದರು. ಮನೆಯಲ್ಲಿಯೇ ಅಡುಗೆ ತಯಾರಿಸಿ ಬೀದಿನಾಯಿಗಳಿಗೆ ಅನ್ನ ಹಾಕುವ ಇವರ ಕಾರ್ಯ ಎಲ್ಲರ ಮೆಚ್ಚುಗೆ ಪಾತ್ರವಾಗಿತ್ತು. ಇವರ ನಿಧನಕ್ಕೆ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ್ ಸೇರಿದಂತೆ ಕಾರ್ಮಿಕ ಮುಖರು ಹಾಗು ಕಾಗದನಗರ ವ್ಯಾಪ್ತಿಯ ನಿವಾಸಿಗಳು ಸಂತಾಪ ಸೂಚಿಸಿದ್ದಾರೆ.
No comments:
Post a Comment