ಭದ್ರಾವತಿ: ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೌಚಾಲಯ ಮತ್ತು ಸ್ನಾನದ ಗೃಹಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ ಕರೆ ನೀಡಿದರು.
ಅವರು ಬುಧವಾರ ಬೆಂಗಳೂರಿನ ನ್ಯಾಬ್ ಫಿನ್ಸ್ ಕಂಪನಿ ವತಿಯಿಂದ ಸಾಮಾಜಿಕ ಕಾರ್ಯಯೋಜನೆಯಡಿ(ಸಿಎಸ್ಆರ್) ಸುಲಬ್ ಇಂಟರ್ನ್ಯಾಷನಲ್ ಸೇವಾ ಸಂಸ್ಥೆ ವತಿಯಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶೌಚಾಲಯ ಮತ್ತು ಸ್ನಾನದ ಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು.
ನಗರಸಭಾ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ನ್ಯಾಬ್ ಫಿನ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಡಾ. ದಿವಾಕರ ಹೆಗಡೆ, ಕಾರ್ಯದರ್ಶಿ ಸುಮತಿ ಶರ್ಮ, ) ಸುಲಬ್ ಇಂಟರ್ನ್ಯಾಷನಲ್ ಸೇವಾ ಸಂಸ್ಥೆ ನಿರ್ವಾಹಕ ಎಂ. ವಿಶ್ವನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂವಿ ಅಶೋಕ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಶಂಕರಪ್ಪ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment