ಬೆಂಗಳೂರಿನ ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ೧೬ ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ನ. ೨೯: ಬೆಂಗಳೂರಿನ ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ವತಿಯಿಂದ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ೧೬ ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಟ್ರಸ್ಟ್ ಸಂಸ್ಥಾಪಕ ಪಂಡಿತ್ ಶ್ರೀನಿವಾಸ್ ಮಾತನಾಡಿ, ಕಳೆದ ಸುಮಾರು ೮ ವರ್ಷದಿಂದ ಕಲಿಕಾ ಸಾಮಾಗ್ರಿಗಳನ್ನು ವಿಸ್ತರಿಸಲಾಗುತ್ತಿದೆ. ೧೯ ಶಾಲೆಗಳಿಂದ ಆರಂಭಗೊಂಡ ಕಾರ್ಯ ಪ್ರಸ್ತುತ ೧೦೫ ಸರ್ಕಾರಿ ಶಾಲೆಗಳಿಗೆ ವಿಸ್ತರಣೆಯಾಗಿದೆ. ದೀನದಲಿತರು ಮತ್ತು ಬುಡಕಟ್ಟು ಶಾಲೆಯ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ಹಂಚಲಾಗುತ್ತಿದೆ. ಇದೊಂದು ಅಳಿಲು ಸೇವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಟ್ರಸ್ಟ್ ವತಿಯಿಂದ ಕಲಿಕಾ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕೆಂದರು.
, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿಬಾಯಿ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಪಂಚಾಕ್ಷರಿ, ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ. ಪೃಥ್ವಿರಾಜ್, ಮಾಜಿ ಅಧ್ಯಕ್ಷ ಎಂ.ಎಸ್ ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ಎನ್ ಶ್ರೀಧರಗೌಡ, ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ಕಾರ್ಯದರ್ಶಿ ಮೋನಿಷಾ, ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಆರ್.ಎಸ್ ರೂಪ ಪ್ರಾರ್ಥಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಖಜಾಂಚಿ ಎಸ್.ಕೆ ಮೋಹನ್ ನಿರೂಪಿಸಿ, ಶಾಲೆಯ ಮುಖ್ಯಶಿಕ್ಷಕಿ ಎಚ್. ಭಾರತಿ ವಂದಿಸಿದರು.
No comments:
Post a Comment