ವ್ಯಾಪಕವಾಗಿ ಹರಿದಾಡುತ್ತಿದೆ ೩ ದಿನಗಳ ಹಿಂದಿನ ವಿಡಿಯೋ
ಭದ್ರಾವತಿ, ನ. ೨೩ : ನಗರದ ಅನ್ವರ್ ಕಾಲೋನಿ ಹೊಳೆಹೊನ್ನೂರು ವೃತ್ತದಲ್ಲಿ ಟಿಪ್ಪು ಸುಲ್ತಾನ್ ಪ್ರತಿಮೆ ಹಾಗು ಮುಖ್ಯದ್ವಾರ ನಿರ್ಮಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಹೋದರ, ಕಾಂಗ್ರೆಸ್ ಮುಖಂಡ ಸಿ.ಎಂ ಖಾದರ್ ಭಾಷಣದ ವಿಡಿಯೋ ಇದೀಗ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.
ಕಳೆದ ೩ ದಿನಗಳ ಹಿಂದೆ ನಗರದ ಹೊಳೆಹೊನ್ನೂರು ವೃತ್ತದಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಟಿಪ್ಪು ಜಯಂತಿ ಹಾಗು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿರುವ ಭಾಷಣದ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಾವು ಬಿ.ಕೆ ಸಂಗಮೇಶ್ವರನ್ನು ಪುನಃ ಕ್ಷೇತ್ರದ ಶಾಸಕರನ್ನಾಗಿ ಆಯ್ಕೆಮಾಡುತ್ತೇವೆ. ಸರ್ಕಾರದಲ್ಲಿ ಮಂತ್ರಿಯನ್ನಾಗಿ ಮಾಡುತ್ತೇವೆ. ಅವರು ಮಂತ್ರಿಯಾದ ನಂತರ ಸುಮಾರು ೨೨ ಅಡಿ ಎತ್ತರದ ಟಿಪ್ಪು ಸುಲ್ತಾನ್ ಪ್ರತಿಮೆ ಹಾಗು ಟಿಪ್ಪು ಹೆಸರಿನ ಮುಖ್ಯದ್ವಾರ ನಿರ್ಮಿಸುವುದು ಖಚಿತ ಎಂದು ಭಾಷಣದಲ್ಲಿ ಹೇಳಿದ್ದು, ಇದಕ್ಕೂ ಮೊದಲು ವೀರಸಾರ್ವಕರ್ ಕುರಿತು ಮಾತನಾಡಿದ್ದಾರೆ. ಈ ವಿಡಿಯೋ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ.
No comments:
Post a Comment