ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗು ಹೈಟೆಕ್ ಶೌಚಾಲಯ ಉದ್ಘಾಟನೆ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ, ನ. ೧೫: ತಾಲೂಕಿನ ಅರಬಿಳಚಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗು ಹೈಟೆಕ್ ಶೌಚಾಲಯ ಉದ್ಘಾಟನೆ ಕಾರ್ಯಕ್ರಮಗಳು ಜರುಗಿದವು.
ಅರಬಿಳಚಿ ಗ್ರಾಮಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ(ನರೇಗಾ)ಯಡಿ ಶಾಲಾ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಶಾಲಾಭಿವೃದ್ಧಿ ಸಮಿತಿ(ಎಸ್‌ಡಿಎಂಸಿ) ಹಾಗು ಭೂದಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಶೌಚಾಲಯ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಮಾತನಾಡಿ, ಹೈಟೆಕ್ ಶೌಚಾಲಯದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ. ವಿದ್ಯಾರ್ಥಿಗಳು ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದರು.
ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರದ ಹಲವಾರು ಸೌಲಭ್ಯಗಳಿದ್ದು, ಇವುಗಳ ಕುರಿತು ತಿಳಿದುಕೊಳ್ಳುವ ಜೊತೆಗೆ ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಮದ ಅಭಿವೃದ್ಧಿಗೆ ಎಲ್ಲರು ಕೈ ಜೋಡಿಸಬೇಕೆಂದರು.
ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಂಚಾಯತಿ ಸದಸ್ಯರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
No comments:
Post a Comment