ಭದ್ರಾವತಿ, ನ. 28: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ನೃತ್ಯ ಕಲಾವಿದ ಅಪೇಕ್ಷ ಮಂಜುನಾಥ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರ ಕಲಾ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಹಾಗು ಸೃಷ್ಟಿ ಶಕ್ತಿ ಸಂಸ್ಥೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರ್ನಾಟಕ ಜನ ಸೇವಾ ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಪ್ರಶಾಂತ್ ಚಕ್ರವರ್ತಿ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಹಾಗು ಸೃಷ್ಟಿ ಶಕ್ತಿ ಸಂಸ್ಥೆ ಅಧ್ಯಕ್ಷ್ಯ ಇಸಾಕ್ ದೊಡ್ಡೇರಿ, ಗಾಯಕ ಶಶಿಧರ ಕೋಟೆ, ಜೂನಿಯರ್ ರಾಜ್ ಕುಮಾರ್ ಡಾ. ಕೆ.ಸಿ ವೆಂಕಟರಾಮು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment