ಭದ್ರಾವತಿ, ನ. ೨೧ : ನಗರದ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ನ.೨೩ರ ವರೆಗೆ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ೯೭ನೇ ಜನ್ಮದಿನೋತ್ಸವ ಹಮ್ಮಿಕೊಳ್ಳಲಾಗಿದೆ.
ಹಿರಿಯೂರು ಗ್ರಾಮ ಹಾಗು ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಸೋಮವಾರ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಅಲ್ಲದೆ ಶ್ರೀ ಸತ್ಯಸಾಯಿ ಯುವ ಯುವ ವಿಭಾಗದವರಿಂದ ಸ್ವಾಮಿಗೆ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು. ಸೀಗೆಬಾಗಿ ಶ್ರೀ ಸತ್ಯಸಾಯಿ ಗ್ರಾಮ ಸೇವಾ ಕೇಂದ್ರದಲ್ಲಿ ನ.೨೨ರಂದು ಬೆಳಿಗ್ಗೆ ೯.೩೦ಕ್ಕೆ ಚಿಂತನ, ಸ್ವಾಮಿಗೆ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.
ನ.೨೩ರಂದು ಶ್ರೀ ಸತ್ಯಸಾಯಿ ಬಾಬಾರವರ ಹುಟ್ಟುಹಬ್ಬ ಆಚರಣೆ ನಡೆಯಲಿದ್ದು, ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ೫ ರಿಂದ ೬ ಗಂಟೆವರೆಗೆ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರಸಂಕೀರ್ತನೆ, ೬.೧೫ಕ್ಕೆ ಪ್ರಶಾಂತಿ ಧ್ವಜಾರೋಹಣ, ೯.೩೦ಕ್ಕೆ ಶ್ರೀ ಸಾಯಿ ಸತ್ಯ ನಾರಾಯಣ ಪೂಜೆ, ಸಹಸ್ರ ನಾಮಾರ್ಚನೆ, ಶಿವಮೊಗ್ಗ ಮಿಡ್‌ಟೌನ್ ರೋಟರಿ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ.
೧೦.೧೫ಕ್ಕೆ ಶ್ರೀ ಸತ್ಯ ಸಾಯಿ ಶಾಲಾ ಮಕ್ಕಳಿಂದ ಪಲ್ಲಕ್ಕಿ ಸೇವೆ, ಮಹಾಮಂಗಳಾರತಿ, ಶಾಲಾ ಮಕ್ಕಳಿಗೆ ಮಹಾಪ್ರಸಾದ ವಿನಿಯೋಗ, ಮಧ್ಯಾಹ್ನ ೧ ಗಂಟೆಗೆ ನಾರಾಯಣರಿಗೆ ವಸ್ತ್ರದಾನ ಮತ್ತು ನಾರಾಯಣ ಸೇವೆ, ಭಕ್ತಾಧಿಗಳಿಗೆ ಮಹಾಪ್ರಸಾದ ವಿನಿಯೋಗ, ಸಂಜೆ ೬ರಿಂದ ೬.೩೦ರವರೆಗೆ ಕಲಾವಾದ್ಯಗಳೊಂದಿಗೆ ಹಾಡುಗಾರಿಕೆ ಹಾಗು ೬.೩೦ ರಿಂದ ೭.೩೦ರ ವರೆಗೆ ಭಜನೆ, ಚಿಂತನೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment