ಶ್ರೀಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿದ ಲಲಿತಾ ಹೋಮ
ಭದ್ರಾವತಿ ಹೊಸಸೇತುವೆ ರಸ್ತೆಯ ಸಿದ್ದಾರೂಢನಗರದ ಭದ್ರಾ ನದಿ ತಟದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಲಲಿತಾ ಹೋಮ ಕಾರ್ಯಕ್ರಮಕ್ಕೆ ಆಗಮಿಸಿದ ದಕ್ಷಿಣಾಮ್ನಾಯ ಶಾರದಾ ಪೀಠದ ವಿಧುಶೇಖರ ಭಾರತಿ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಭದ್ರಾವತಿ, ನ. ೨೬: ಇಲ್ಲಿನ ಹೊಸಸೇತುವೆ ರಸ್ತೆಯ ಸಿದ್ದಾರೂಢನಗರದ ಭದ್ರಾ ನದಿ ತಟದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಶನಿವಾರ ಆಯೋಜಿಸಲಾಗಿದ್ದ ಲಲಿತಾ ಹೋಮ ದಕ್ಷಿಣಾಮ್ನಾಯ ಶಾರದಾ ಪೀಠದ ವಿಧುಶೇಖರ ಭಾರತಿ ಶ್ರೀ ನೇತೃತ್ವದಲ್ಲಿ ಸಂಪನ್ನಗೊಂಡಿತು.
ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿದ ಶ್ರೀಗಳನ್ನು ಕೆಎಸ್‌ಆರ್‌ಟಿಸಿ ಘಟಕದ ಬಳಿ ಶ್ರೀ ಶಂಕರ ವೃತ್ತದಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಅಲಂಕೃತ ವಾಹನದಲ್ಲಿ ಶ್ರೀಗಳ ಅದ್ದೂರಿ ಮೆರವಣಿಗೆ ನಡೆಸಲಾಯಿತು. ಡೊಳ್ಳು ಕುಣಿತ, ಕರಾವಳಿಯ ಚಂಡೆ ವಾದ್ಯ, ನಾದಸ್ವರದದ ಮೆರುಗಿನೊಂದಿಗೆ ಉತ್ಸವದಲ್ಲಿ ನೂರಾರು ಮಹಿಳೆಯರು ಜ್ಯೋತಿಗಳನ್ನು ಹಿಡಿದು ಸಾಗಿದರು.
ಭದ್ರಾವತಿ ಹೊಸಸೇತುವೆ ರಸ್ತೆಯ ಸಿದ್ದಾರೂಢನಗರದ ಭದ್ರಾ ನದಿ ತಟದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಲಲಿತಾ ಹೋಮ ಕಾರ್ಯಕ್ರಮಕ್ಕೆ ಆಗಮಿಸಿದ ದಕ್ಷಿಣಾಮ್ನಾಯ ಶಾರದಾ ಪೀಠದ ವಿಧುಶೇಖರ ಭಾರತಿ ಶ್ರೀಗಳು ಚಂದ್ರಮೌಳೇಶ್ವರ ದೇವರ ಪೂಜೆ ನೆರವೇರಿಸಿದರು.
ನಂತರದಲ್ಲಿ ಶ್ರೀಮಠದಲ್ಲಿ ಶ್ರೀಗಳು ಮಹಾಗಣಪತಿ, ಶಾರದಾಂಬೆ ಹಾಗೂ ಶಂಕರಾಚಾರ್ಯರ ದರ್ಶನ ಪಡೆದು, ಧೂಳಿ ಪಾದಪೂಜೆಯಲ್ಲಿ ಪಾಲ್ಗೊಂಡರು. ಕೊನೆಯಲ್ಲಿ ಶ್ರೀಗಳು ಚಂದ್ರಮೌಳೇಶ್ವರ ದೇವರ ಪೂಜೆ ನೆರವೇರಿಸಿದರು.
ಶ್ರೀಗಳ ಸಮ್ಮುಖದಲ್ಲಿ ಶ್ರೀಲಲಿತಾ ಹೋಮ ಪೂರ್ಣಾಹುತಿ ನಡೆದಿದ್ದು, ಆನಂತರ ನೆರೆದಿದ್ದ ಭಕ್ತರಿಗೆ ಶ್ರೀಗಳಿಂದ ಫಲ ಮಂತ್ರಾಕ್ಷತೆ ಅನುಗ್ರಹ ನಡೆಯಿತು.
No comments:
Post a Comment