ಭದ್ರಾವತಿ, ನ. ೨೦ ನಗರದ ಹೊಸಸೇತುವೆ ರಸ್ತೆಯಲ್ಲಿರುವ ಸಿದ್ದಾರೂಢನಗರದ ಶ್ರೀ ಶೃಂಗೇರಿ ಶಂಕರ ಮಠಕ್ಕೆ ನ.೨೫ರಂದು ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಆಗಮಿಸುತ್ತಿದ್ದಾರೆಂದು ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ತಿಳಿಸಿದರು.
ಅವರು ಭಾನುವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಅಂದು ಸಂಜೆ ೬ ಗಂಟೆಗೆ ಶ್ರೀಗಳನ್ನು ಕೆಎಸ್‌ಆರ್‌ಟಿಸಿ ಘಟಕದ ಸಮೀಪದಲ್ಲಿರುವ ಶ್ರೀ ಶಂಕರವೃತ್ತದಿಂದ ವೇದಘೋಷದೊಂದಿಗೆ, ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಗುವುದು. ಶ್ರೀಗಳು ಮಠಕ್ಕೆ ಪ್ರವೇಶಿಸಿದ ಸಂದರ್ಭದಲ್ಲಿ ಧೂಳಿ ಪಾದ ಪೂಜೆ ನಡೆಯಲಿದ್ದು, ನಂತರ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ರಾತ್ರಿ ೮.೩೦ಕ್ಕೆ ಶ್ರೀಗಳು ಶ್ರೀ ಶಾರದಾ ಚಂದ್ರಮೌಳೀಶ್ವರರ ಪೂಜೆ ನೆರವೇರಿಸಲಿದ್ದು, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಜರುಗಲಿದೆ ಎಂದರು.
ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ನ.೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಶ್ರೀ ಲಲಿತಾ ಹೋಮ ಜರುಗಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ನಡೆಯಲಿದೆ. ನಂತರ ಶ್ರೀಗಳಿಂದ ಫಲ-ಮಂತ್ರಾಕ್ಷತೆ ಅನುಗ್ರಹ ಜರುಗಲಿದೆ ಎಂದರು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದಾಂಬೆ ಹಾಗು ಶ್ರೀಗಳ ಕೃಪೆಗೆ ಪಾತ್ರರಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.
ಪ್ರಮುಖರಾದ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಕೆ.ಎಸ್ ನಾಗರಾಜ್, ಲಲಿತಾ ನಾಗರಾಜ್ ಹಾಗು ಮಠದ ವ್ಯವಸ್ಥಾಪಕ ಶಾಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿಗೆ ನ.೨೫ರಂದು ಶ್ರೀ ಶೃಂಗೇರಿ ಜಗದ್ಗುರುಗಳ ಆಗಮನ ಕುರಿತು ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹತಿ ನೀಡಿದರು.
No comments:
Post a Comment