ಭದ್ರಾವತಿ ತರುಣ ಭಾರತಿ ವಿದ್ಯಾಕೇಂದ್ರ, ನ್ಯೂಕಾಲೋನಿ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ದಿನಾಚರಣೆ ನಡೆಯಿತು.
ಭದ್ರಾವತಿ, ನ. ೧೪: ತರುಣ ಭಾರತಿ ವಿದ್ಯಾಕೇಂದ್ರ, ನ್ಯೂಕಾಲೋನಿ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ದಿನಾಚರಣೆ ನಡೆಯಿತು.
ಈ ಶಾಲೆಯನ್ನು ಹಳೇಯ ವಿದ್ಯಾರ್ಥಿಗಳು ಮುನ್ನಡೆಸಿಕೊಂಡು ಹೋಗುತ್ತಿದ್ದು, ಪೂರ್ವ ಪ್ರಾಥಮಿಕದಿಂದ ೭ನೇ ತರಗತಿವರೆಗೂ ಉಚಿತ ಶಿಕ್ಷಣ ನೀಡುತ್ತಿರುವುದು ಈ ಶಾಲೆಯ ವಿಶೇಷತೆಯಾಗಿದೆ. ಸುಮಾರು ೮೦ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಎಲ್ಲಾ ಮಕ್ಕಳಿಗೂ ಸಿಹಿ ಹಂಚುವ ಮೂಲಕ ಉಚಿತವಾಗಿ ಮಗ್ಗಿ ಪುಸ್ತಕಗಳನ್ನು ವಿತರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ ಜನಾರ್ಧನ ಅಧ್ಯಕ್ಷತೆ ವಹಿಸಿದ್ದರು. ಎಮೆರೆಟಸ್ ಪ್ರೊಫೆಸರ್, ಸಾಹಿತಿ ಡಾ. ವಿಜಯದೇವಿ, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಗೌರವಾಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಯಶೋಧ ವೀರಭದ್ರಪ್ಪ, ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ನಾಗರಾಜ್‌ಶೇಟ್, ಸದಸ್ಯರಾದ ಕಲ್ಪನ ಮಂಜುನಾಥ್, ಭಾಗ್ಯ ನಿಜಗುಣ, ರೇಣುಕಾ ಚಂದ್ರಶೇಖರಯ್ಯ, ಶಕುಂತಲ, ವಾಣಿ ನಾಗರಾಜ್, ಅನ್ನಪೂರ್ಣ ಸತೀಶ್ ಸೇರಿದಂತೆ ಶಾಲೆಯ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment