ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕರು ಶಾಸನಬದ್ಧವಾಗಿ ಬರಬೇಕಾದ ಭವಿಷ್ಯ ನಿಧಿ ಹಣ ಹಾಗು ಸಂಚಿತ ಬಡ್ಡಿಯನ್ನು ಭವಿಷ್ಯ ನಿಧಿ ಖಾತೆಗೆ ಜಮಾ ಮಾಡುವಂತೆ ಒತ್ತಾಯಿಸಿ ಶಿವಮೊಗ್ಗ ಭವಿಷ್ಯನಿಧಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ, ನ. ೧೨: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕರು ಶಾಸನಬದ್ಧವಾಗಿ ಬರಬೇಕಾದ ಭವಿಷ್ಯ ನಿಧಿ ಹಣ ಹಾಗು ಸಂಚಿತ ಬಡ್ಡಿಯನ್ನು ಭವಿಷ್ಯ ನಿಧಿ ಖಾತೆಗೆ ಜಮಾ ಮಾಡುವಂತೆ ಒತ್ತಾಯಿಸಿ ಶಿವಮೊಗ್ಗ ಭವಿಷ್ಯನಿಧಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಿವೃತ್ತ ಕಾರ್ಮಿಕರಿಗೆ ಡಿಎ ಬಾಕಿ ವಿತರಿಸುವಾಗ ಶಾಸನಬದ್ದವಾಗಿ ನೀಡಬೇಕಾಗಿದ್ದ ಉದ್ಯೋಗಿ ಮತ್ತು ಉದ್ಯೋಗದಾತರ ಭಾಗದ ಭವಿಷ್ಯನಿಧಿ ಹಣ ಮತ್ತು ಸಂಚಿತ ಬಡ್ಡಿಯನ್ನು ಕಾರ್ಮಿಕರ ಭವಿಷ್ಯನಿಧಿ ಖಾತೆಗೆ ಜಮಾ ಮಾಡದೆ ಕಾರ್ಖಾನೆ ಆಡಳಿತ ಮಂಡಳಿ ಅನ್ಯಾಯವೆಸಗಿದ್ದು, ಇದರ ವಿರುದ್ಧ ಸುಮಾರು ೫೫೦ ನಿವೃತ್ತ ಕಾರ್ಮಿಕರು ವೈಯುಕ್ತಿಕವಾಗಿ ಭವಿಷ್ಯನಿಧಿ ಆಯುಕ್ತರಿಗೆ ಈ ಹಿಂದೆ ದೂರು ನೀಡಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಶುಕ್ರವಾರ ನಡೆದ ಭವಿಷ್ಯ ನಿಧಿ ಅದಾಲತ್‌ನಲ್ಲಿ ಎಂಪಿಎಂ ನಿವೃತ್ತ ನೊಂದ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ತಕ್ಷಣ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ವೇದಿಕೆ ಪ್ರಧಾನ ಸಂಚಾಲಕ ಟಿ.ಜಿ ಬಸವರಾಜಯ್ಯ, ಪ್ರಮುಖರಾದ ವೆಂಕಟೇಶಮೂರ್ತಿ, ರಘುನಾಥರಾವ್, ಶಿವಲಿಂಗಯ್ಯ, ತಾರಕೇಶ್ವರ, ಗೋವಿಂದಪ್ಪ, ಬಾಪು ಸೇರಿದಂತೆ ನಿವೃತ್ತ ಕಾರ್ಮಿಕರು ಉಪಸ್ಥಿತರಿದ್ದರು.
No comments:
Post a Comment