ಭದ್ರಾವತಿ, ನ. ೧೭ : ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಮೃತಪಟ್ಟಿರುವ ಘಟನೆ ಗುರುವಾರ ನಗರದ ಬೈಪಾಸ್ ರಸ್ತೆ ವೀರಾಪುರ ತಿರುವಿನ ಬಳಿ ನಡೆದಿದೆ.
ತರೀಕೆರೆ ತಾಲೂಕಿನ ಅಮೃತಪುರ ಹೋಬಳಿ ವ್ಯಾಪ್ತಿಯ ಕೆ. ನದೀಶ್(೩೪) ಬಿನ್ ಲೇಟ್ ಕಲೇಶಪ್ಪ ಮೃತಪಟ್ಟಿದ್ದು, ಮಧ್ಯಾಹ್ನ ಶಿವಮೊಗ್ಗದಿಂದ ತರೀಕೆರೆಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಘಟನೆ ಸಂಬಂಧ ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ ನದೀಶ್ ತಾಯಿ ಗಂಗಮ್ಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
No comments:
Post a Comment