ಸುಬ್ಬಾರೆಡ್ಡಿ
ಭದ್ರಾವತಿ, ನ. ೨೪ : ನಗರದ ಜನ್ನಾಪುರ ರಾಜಪ್ಪ ಬಡಾವಣೆ ನಿವಾಸಿ, ಗುತ್ತಿಗೆದಾರ, ನಗರಸಭೆ ಮಾಜಿ ಸದಸ್ಯ ಸುಬ್ಬಾರೆಡ್ಡಿ(೮೦) ಬುಧವಾರ ರಾತ್ರಿ ನಿಧನ ಹೊಂದಿದರು.
ಪುತ್ರಿ ಹಾಗು ಇಬ್ಬರು ಪುತ್ರರನ್ನು ಹೊಂದಿದ್ದರು. ಒಂದು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಹಾಗು ಮತ್ತೊಂದು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ನಗರಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರು.
ಸುಬ್ಬಾರೆಡ್ಡಿಯವರು ನಗರದ ಪ್ರಮುಖ ಗುತ್ತಿಗೆದಾರರಲ್ಲಿ ಒಬ್ಬರಾಗಿ ಗುರುತಿಸಿ ಕೊಂಡಿದ್ದರು. ನಗರದಲ್ಲಿ ಪ್ರಮುಖ ಕಟ್ಟಡಗಳನ್ನು ನಿರ್ಮಿಸಿರುವ ಕೀರ್ತಿ ಇವರದ್ದಾಗಿದೆ. ತೆಲುಗು ರೆಡ್ಡಿ ಸಮುದಾಯದ ಮುಖಂಡರಾಗಿ ಸಹ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment